ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ, ಆಕ್ರೋಶ ಜೋರಾಗಿದೆ. ಇನ್ನೊಂದೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಸೋಂನ 10 ಜಿಲ್ಲೆಗಳಲ್ಲಿ 24 ಗಂಟೆಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅಸ್ಸೋಂ ಮತ್ತು ತ್ರಿಪುರದಲ್ಲಿ ಅಸ್ಸೋಂ ರೈಫಲ್ಸ್‌ನ ತುಕಡಿಗಳನ್ನು ನಿಯೋಜಿಸಲಾಗಿದ್ದು, ಗುವಾಹಟಿಯಲ್ಲಿ ಕರ್ಫ್ಯೂ ಹೇರಲಾಗಿದೆ.