ಶ್ರೀಕಾಕುಲಂ /ಆಂಧ್ರಪ್ರದೇಶ: ಸುಮಾರು ಒಂದು ಕೋಟಿ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಅಂತಾರಾಜ್ಯ ಗಾಂಜಾ ಮಾರಾಟಗಾರರ ಗ್ಯಾಂಗ್ ಅನ್ನು ಆಂಧ್ರದ ಶ್ರೀಕಾಕುಲಂ ಜಿಲ್ಲೆಯ ಸಿಲಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಧಿಸಲಾಗಿದೆ.
ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಒಂದು ಕೋಟಿ ರೂ ಮೌಲ್ಯದ ಗಾಂಜಾವನ್ನು ಸೀಜ್ ಮಾಡಲಾಗಿದೆ. ಟ್ಯಾಂಕರ್ ವಾಹನದಲ್ಲಿ ಗಾಂಜಾ ತುಂಬಿ ಸಾಗಣೆ ಮಾಡಲಾಗುತ್ತಿತ್ತು. ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮೂರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧನೆ ನಡೆಸಲಾಗುತ್ತಿದೆ.
ಬಂಧಿತ ಆರೋಪಿಗಳು ಒಡಿಶಾ ಮತ್ತು ಪಂಜಾಬ್ ಮೂಲದವರು ಎನ್ನಲಾಗಿದ್ದು, ಇವರು ಸುಮಾರು 2818 ಕೆಜಿ ಗಾಂಜಾವನ್ನು ವಿಶಾಖಪಟ್ಟಣದಿಂದ ಒಡಿಶಾಗೆ ಸಾಗಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.