ETV Bharat / bharat

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದು ಬೆನ್ನಿಗೆ ನಿಂತ ಕೈ ಪಡೆ - ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ)

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಲೇವಾದೇವಿ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ವಿರುದ್ಧ ಸುತ್ತೋಲೆಗಳನ್ನು ಹೊರಡಿಸಿವೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಶಿ ತರೂರ್ ಸೇರಿದಂತೆ ಹಲವರು ಬುಧವಾರ ಪಿ ಚಿದಂಬರಂ ಅವರ ಬೆನ್ನಿಗೆ ನಿಂತಿದ್ದಾರೆ.

ಚಿದಂಬರಂ
author img

By

Published : Aug 21, 2019, 10:26 PM IST

Updated : Aug 21, 2019, 11:48 PM IST

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಲೇವಾದೇವಿ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ವಿರುದ್ಧ ಸುತ್ತೋಲೆಗಳನ್ನು ಹೊರಡಿಸಿವೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಶಿ ತರೂರ್ ಸೇರಿದಂತೆ ಹಲವರು ಬುಧವಾರ ಪಿ ಚಿದಂಬರಂ ಅವರ ಬೆನ್ನಿಗೆ ನಿಂತಿದ್ದಾರೆ.

ಐಎನ್ಎಕ್ಸ್ ಮೀಡಿಯಾಕ್ಕೆ ಸಂಬಂಧಿಸಿದ ಹಗರಣದಲ್ಲಿ ಪಿ ಚಿದಂಬರಂ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದ್ದ ಕಾರಣ ಕಾಂಗ್ರೆಸ್ ನಾಯಕರು ಚಿಂದಬರಂ ಅವರನ್ನು ಬೆಂಬಲಿಸಿದ್ದರು. ಮಾಜಿ ಹಣಕಾಸು ಸಚಿವರ 'ಚಾರಿತ್ರ್ಯ ಹರಣ' ಮಾಡಲು ತನಿಖಾ ಏಜೆನ್ಸಿಗಳು ಮತ್ತು ಮಾಧ್ಯಮಗಳನ್ನು ಸರ್ಕಾರ ಬಳಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸತ್ಯವನ್ನು ಹೇಳಿದ್ದಕ್ಕಾಗಿ ಸರ್ಕಾರ ತನ್ನ ನಾಗರಿಕರನ್ನು ಹಿಂಸಿಸುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ, ಏನೇ ಇರಲಿ ನಮ್ಮ ಪಕ್ಷ ಅವರೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ, ಆನಂದ್ ಶರ್ಮಾ ಮತ್ತು ಶಶಿ ತರೂರ್ ಅವರು ಚಿದಂಬರಂ ಕುರಿತು ಒಗ್ಗಟ್ಟಿನಿಂದ ಮಾತನಾಡಿದ್ದಾರೆ.

ಮಂಗಳವಾರ ದೆಹಲಿ ಹೈಕೋರ್ಟ್ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ.ಚಿದಂಬರಂ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಗ್ವಿ ಸೇರಿದಂತೆ ಪಕ್ಷದ ನಾಯಕರುಗಳು ಪಿ.ಚಿದಂಬರಂ ಪರವಾಗಿ ಬ್ಯಾಟ್​ ಬೀಸಿದ್ದರು.

ಬುಧವಾರ ಮುಂಜಾನೆ ಚಿದಂಬರಂ ಅವರಿಗೆ ಇಡಿ ಮತ್ತು ಸಿಬಿಐ ನೋಟಿಸ್ ನೀಡಿದ್ದು, 2 ಗಂಟೆಗಳಲ್ಲಿ ತಮ್ಮ ಮುಂದೆ ಹಾಜರಾಗುವಂತೆ ಕೋರಿವೆ ಎಂದು ಸಿಬಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಶ್ರೀ ಚಿದಂಬರಂ ಅವರನ್ನು ಹತ್ಯೆ ಮಾಡಲು ಮೋದಿ ಸರ್ಕಾರ ಇಡಿ, ಸಿಬಿಐ ಮತ್ತು ತನ್ನ ಬೆಂಬಲಿತ ಮಾಧ್ಯಮಗಳನ್ನು ಬಳಸುತ್ತಿದೆ. ಅಧಿಕಾರದ ಈ ನಾಚಿಕೆಗೇಡಿನ ದುರುಪಯೋಗವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್​ ಮಾಡಿದ್ದರು.

Intro:Body:Conclusion:
Last Updated : Aug 21, 2019, 11:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.