ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಪ್ರಯಾಣ ಬೆಳೆಸಿದ್ದ ಬಿಸಿಸಿಐ ವೈದ್ಯಕೀಯ ತಂಡದ ಓರ್ವ ವೈದ್ಯನಿಗೂ ಕೊರೊನಾ ದೃಢವಾಗಿದೆ. ಇನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
"ಹಿರಿಯ ವೈದ್ಯಕೀಯ ಅಧಿಕಾರಿಗೆ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಕ್ವಾರಂಟೈನ್ ಮಾಡಲಾಗಿದೆ. ಎನ್‌ಸಿಎಯಲ್ಲಿ ಸಹ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಅವರನ್ನೂ ಸಹ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 29ರಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಇಬ್ಬರು ಆಟಗಾರರು ಸೇರಿದಂತೆ 13 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ. ಸಿಎಸ್ಕೆ ತಂಡದಲ್ಲಿ ಕೊರೊನಾ ಪ್ರಕರಣ ಕಂಡು ಬಂದಿತ್ತು. ಆದರೆ ಸೆಪ್ಟೆಂಬರ್ 1ರಂದು ಸಿಇಒ ಕಾಶಿ ವಿಶ್ವನಾಥನ್ ಅವರು ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಕಂಡು ಬಂದಿಲ್ಲ ಎಂದು ತಿಳಿಸಿದ್ದರು.
ಐಪಿಎಲ್ 2020 ಯುಎಇಯಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿದೆ. ದುಬೈ, ಅಬುಧಾಬಿ ಮತ್ತು ಶಾರ್ಜಾಗಳಲ್ಲಿ ಪಂದ್ಯಗಳು ನಡೆಯಲಿವೆ.