ETV Bharat / bharat

ಮೊದಲು ಡಿಜಿಟಲ್​ ಮಾಧ್ಯಮಗಳನ್ನು ನಿಯಂತ್ರಿಸಬೇಕು: ಸುಪ್ರೀಂಕೋರ್ಟ್​ಗೆ ಕೇಂದ್ರ ಮಾಹಿತಿ

ಮುಖ್ಯ ವಾಹಿನಿಯ ಎಲೆಕ್ಟ್ರಾನಿಕ್ ಅಥವಾ ಮುದ್ರಣ ಮಾಧ್ಯಮಗಳಿಗೂ ಮೊದಲು ಡಿಜಿಟಲ್ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

It is digital media which needs regulations
ಡಿಜಿಟಲ್​ ಮಾಧ್ಯಮಗಳನ್ನು ನಿಯಂತ್ರಿಸಬೇಕು
author img

By

Published : Sep 17, 2020, 1:34 PM IST

ನವದೆಹಲಿ: ಮಾಧ್ಯಮಗಳನ್ನು ನಿಯಂತ್ರಿಸುವ ಕಾರ್ಯ ಪ್ರಾರಂಭಿಸಲು ಉತ್ಸುಕರಾಗಿದ್ದರೆ ಮುಖ್ಯವಾಹಿನಿಯ ಮಾಧ್ಯಮಗಳ ಬದಲು ಮೊದಲು ಡಿಜಿಟಲ್ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಮುಖ್ಯವಾಹಿನಿಯ ಮಾಧ್ಯಮವೊಂದರಲ್ಲಿ (ಎಲೆಕ್ಟ್ರಾನಿಕ್ ಅಥವಾ ಮುದ್ರಣ ಇರಲಿ), ಪ್ರಕಟಣೆ ಅಥವಾ ಪ್ರಸಾರವು ಒಂದು ಸಮಯದ ಕಾರ್ಯವಾಗಿದೆ. ಆದರೆ ಡಿಜಿಟಲ್ ಮಾಧ್ಯಮವು ವ್ಯಾಪಕ ಶ್ರೇಣಿಯ ಓದುಗರನ್ನು ತಲುಪುತ್ತದೆ ಮತ್ತು ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್‌ನಂತಹ ಹಲವಾರು ಎಲೆಕ್ಟ್ರಾನಿಕ್ ಅಪ್ಲಿಕೇಶನ್‌ಗಳಿಂದಾಗಿ ವೈರಲ್ ಆಗುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸುಪ್ರೀಂಕೋರ್ಟ್‌ನಲ್ಲಿನ ಅಫಿಡವಿಟ್‌ನಲ್ಲಿ ಹೇಳಿದೆ.

ಗಂಭೀರ ಪರಿಣಾಮ ಮತ್ತು ಸಾಮರ್ಥ್ಯವನ್ನು ಪರಿಗಣಿಸಿ, ನ್ಯಾಯಾಲಯವು ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಿದರೆ ಎಲೆಕ್ಟ್ರಾನಿಕ್ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಚೌಕಟ್ಟು ಮತ್ತು ನ್ಯಾಯಾಂಗ ಘೋಷಣೆಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಹಾಗಾಗಿ ಮೊದಲು ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಚೌಕಟ್ಟು ರೂಪಿಸಬೇಕು ಎಂದು ಖಾಸಗಿ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲಾಗಿದೆ.

"ಮುಖ್ಯವಾಹಿನಿಯ ಎಲೆಕ್ಟ್ರಾನಿಕ್ ಮಾಧ್ಯಮ, ಮುಖ್ಯವಾಹಿನಿಯ ಮುದ್ರಣ ಮಾಧ್ಯಮ ಮತ್ತು ಸಮಾನಾಂತರ ಮಾಧ್ಯಮಗಳಾದ ಡಿಜಿಟಲ್ ಮುದ್ರಣ ಮಾಧ್ಯಮ ಮತ್ತು ಡಿಜಿಟಲ್ ವೆಬ್ ಆಧಾರಿತ ಸುದ್ದಿ ಪೋರ್ಟಲ್ ಮತ್ತು ಯೂಟ್ಯೂಬ್ ಚಾನೆಲ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಒಳಗೊಂಡಿದೆ" ಎಂದು ಸಚಿವಾಲಯ ತಿಳಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಕೆ.ಎಂ. ಜೋಸೆಫ್ ಮತ್ತು ಇಂದೂ ಮಲ್ಹೋತ್ರಾ ಮುಂದಿನ ಆದೇಶದವರೆಗೆ ಖಾಸಗಿ ಟಿವಿಯ ಯುಪಿಎಸ್​ಸಿ ಜಿಹಾದ್ ಕಾರ್ಯಕ್ರಮದ ಪ್ರಸಾರವನ್ನು ತಡೆ ಹಿಡಿದಿದ್ದಾರೆ.

ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾನದಂಡಗಳನ್ನು ರೂಪಿಸಲು ಯಾವುದೇ ರಾಜಕೀಯವಾಗಿ ವಿಭಜಿಸುವ ದೃಷ್ಟಿಕೋನವನ್ನು ಹೊಂದಿರದ ಪ್ರಶ೦ಸನೀಯ ಸ್ಥಾನಮಾನದ ಜನರು ಸೇರಿದಂತೆ ಐದು ಸದಸ್ಯರ ಸಮಿತಿಯೊಂದನ್ನು ಸ್ಥಾಪಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.