ಶ್ರೀನಗರ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಸೈನಿಕರು ವೀರಮರಣವನ್ನಪ್ಪಿದ್ದಾರೆ.
![J&K: 2 soldiers succumb to injuries sustained during ceasefire violation by Pak](https://etvbharatimages.akamaized.net/etvbharat/prod-images/7026573_o.jpg)
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರಾಮ್ಪುರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಶನಿವಾರ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಅವರು ತಿಳಿದ್ದಾರೆ. ಹುತಾತ್ಮರಾದ ಸೈನಿಕರನ್ನು ಹವಲ್ದಾರ್ ಗೋಕರನ್ ಸಿಂಗ್ ಮತ್ತು ನಾಯಕ್ ಶಂಕರ್ ಎಸ್.ಪಿ.ಕೊಯ್ ಎಂದು ಗುರುತಿಸಲಾಗಿದೆ. ಇಬ್ಬರೂ ಕುಮಾವೂನ್ ರೆಜಿಮೆಂಟ್ಗೆ ಸೇರಿದವರು.
ಶುಕ್ರವಾರ ರಾಮ್ಪುರ್ ಸೆಕ್ಟರ್ನಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ವರ್ಷದ ಬಾಲಕ ಸೇರಿದಂತೆ ಮೂವರು ಸೈನಿಕರು ಮತ್ತು ಮೂವರು ನಾಗರಿಕರು ಗಾಯಗೊಂಡಿದ್ದರು.