ETV Bharat / bharat

ಕಾಶ್ಮೀರಕ್ಕೆ ಭೇಟಿ ನೀಡಲಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ - ಬರಾಮುಲ್ಲಾ ಪಾಸ್​ಪೋರ್ಟ್​ ಕೇಂದ್ರ

ವಿದೇಶಾಂಗ ಸಚಿವ ಎಸ್.ಜೈಶಂಕರ್ ಇಂದು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರಕ್ಕೆ ಭೇಟಿ ನೀಡಲಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ Jaishankar arrives on surprise visit to Kashmir
ವಿದೇಶಾಂಗ ಸಚಿವ ಎಸ್.ಜೈಶಂಕರ್
author img

By

Published : Mar 9, 2020, 1:08 PM IST

ಶ್ರೀನಗರ (ಜಮ್ಮುಕಾಶ್ಮೀರ) : ವಿದೇಶಾಂಗ ಸಚಿವ ಎಸ್.ಜೈಶಂಕರ್ ಇಂದು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಬೌಲೆವಾರ್ಡ್ ಪ್ರದೇಶದ ಪ್ರಸಿದ್ಧ ದಾಲ್ ಸರೋವರದ ದಂಡೆಯಲ್ಲಿರುವ ಶ್ರೀನಗರ ಪಾಸ್​ಪೋರ್ಟ್ ಕಚೇರಿಗೆ ಕೇಂದ್ರ ಸಚಿವರು ಭೇಟಿ ನೀಡಲಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೂ ಜೈಶಂಕರ್ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವರ ಭೇಟಿಯ ಮುಖ್ಯ ಉದ್ದೇಶ ಇನ್ನೂ ತಿಳಿದುಬಂದಿಲ್ಲವಾದರೂ, ಅವರು ಇರಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕುಟುಂಬಗಳನ್ನು ಭೇಟಿಯಾಗಬಹುದೆಂದು ಹೇಳಲಾಗಿದೆ. ಕೊರೊನಾ ವೈರಸ್ ಭೀತಿಯಿಂದಾಗಿ ವಿದ್ಯಾರ್ಥಿಗಳನ್ನು ಇರಾನ್‌ನಿಂದ ವಾಪಸ್​ ಭಾರತಕ್ಕೆ ತರುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.