ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಾಮಿಯಾ ವಿವಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದು ತೀವ್ರ ವಿಕೋಪಕ್ಕೆ ತಿರುಗಿದೆ. ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಮೂರು ಬಸ್‌ಗಳಿಗೆ ಜಾಮಿಯಾ ವಿದ್ಯಾರ್ಥಿಗಳು ಬೆಂಕಿ ಹಚ್ಚಿದ್ದಾರೆ.
ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ಘರ್ಷಣೆ ಉಂಟಾಗಿದೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ಮತ್ತು ಅಶ್ರುವಾಯುವನ್ನು ಸಿಡಿಸಿದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಮೂರು ಬಸ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತ್ಯಕ್ಷದರ್ಶಿಯೂ ಆಗಿರುವ ಬಸ್ನ ಚಾಲಕ ಮತ್ತು ಸೆಕ್ಯೂರಿಟಿ ಗಾರ್ಡ್ ನಡೆದ ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅವರ ಎಕ್ಸಕ್ಲೂಸಿವ್ ಬೈಟ್ಗಳು ಈಟಿವಿ ಭಾರತಕ್ಕೆ ಲಭಿಸಿವೆ...