ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಹೊಂಚು ಹಾಕುತ್ತಿದ್ದ ಉಗ್ರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಇಂದು ಮುಂಜಾನೆ, ಕುಪ್ವಾರಾ ಜಿಲ್ಲೆಯ ನೌಗಮ್ ಸೆಕ್ಟರ್‌ನಲ್ಲಿ ಉಗ್ರರ ನುಸುಳುವಿಕೆಯನ್ನು ಗಮನಿಸಿದ ನಮ್ಮ ಸೇನೆ ತಕ್ಷಣವೇ ಎನ್ಕೌಂಟರ್ ನಡೆಸಿ, ಇಬ್ಬರನ್ನು ಹತ್ಯೆ ಮಾಡಿದೆ. ಉಗ್ರರ ಬಳಿಯಿದ್ದ ಎರಡು ಎಕೆ -47 ರೈಫಲ್‌ಗಳು, ಮದ್ದು ಗುಂಡುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಜೂನ್ ಆರಂಭದಲ್ಲಿ ನೌಗಮ್ ವಲಯದಲ್ಲೇ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವ ಉಗ್ರರ ಪ್ರಯತ್ನವನ್ನು ಸೇನೆ ವಿಫಲಗೊಳಿಸಿತ್ತು.