ಜಮ್ಮು ಮತ್ತು ಕಾಶ್ಮೀರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಾಂವಿಧಾನಿಕ 370ನೇ ವಿಧಿ ರದ್ದುಗೊಳಿಸಿ ಆಗಸ್ಟ್ 5ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಹಠಾತ್ತನೆ ರಾಜೀನಾಮೆ ನೀಡಿದ್ದಾರೆ.
ಭಾರತದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮಹಾಲೇಖಪಾಲರಿಗೆ (ಸಿಎಜಿ) ಹುದ್ದೆಗೆ ಮುರ್ಮು ಅವರು ಮುಂಚೂಣಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಜಿ.ಸಿ. ಮುರ್ಮು 1985ರ ಬ್ಯಾಚ್ ಭಾರತೀಯ ಆಡಳಿತಾತ್ಮಕ ಸೇವೆಯ (ಐಎಎಸ್) ಗುಜರಾತ್ ಕೇಡರ್ ಅಧಿಕಾರಿಯಾಗಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಸಹ ಆಗಿದ್ದರು.
ಮುರ್ಮು ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಆದರೆ, ಅದನ್ನು ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಖಚಿತಪಡಿಸಿಲ್ಲ.
ಕೇಂದ್ರವು 370ನೇ ವಿಧಿಯನ್ನು ಹಿಂತೆಗೆದುಕೊಂಡ ನಂತರ ಕಣಿವೆ ರಾಜ್ಯದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ, ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಆಗಿ ವಿಭಜಿಸಿತ್ತು.