ಸೊಪೋರ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳಿಂದ ಸೊಪೋರ್ನಲ್ಲಿ ಲಷ್ಕರ್-ಎ-ತೈಬಾ ಸಂಘಟನೆಯ ಐವರನ್ನು ಬಂಧಿಸಲಾಗಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನಲ್ಲಿ ಜಂಟಿ ಕಾರ್ಯಚರಣೆ ನಡೆಸಿ ಐವರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಸೊಪೋರ್ನಲ್ಲಿ ಭಯೋತ್ಪಾದನಾ ಗುಂಪುಗಳನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೀಗ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಜತೆಗೆ ಜಲಂಧರ್ನಲ್ಲಿ ಭಾರತದ ಗಡಿ ದಾಟಿದ್ದ ಆರು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಭಾರತೀಯ ಗಡಿ ಭದ್ರತಾ ಪಡೆ, ಮರಳಿ ಪಾಕ್ ರೇಂಜರ್ಸ್ಗೆ ಹಸ್ತಾಂತರ ಮಾಡಿದೆ. ಜನವರಿ 8ರಂದು ಅವರು ಭಾರತೀಯ ಗಡಿ ಪ್ರವೇಶಿಸಿದ್ದರು.