ಜಮ್ಮು-ಕಾಶ್ಮೀರ: ಗಡಿ ಭದ್ರತಾ ಪಡೆ ಆಯೋಜಿಸಿದ್ದ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಹಿಳೆಯರು ಭಾಗವಹಿಸಿದ್ದಾರೆ.
ಗುರುವಾರ ಜಮ್ಮುವಿನ ಸಾಂಬಾ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯು (BSF) ಸೇನಾ ನೇಮಕಾತಿ ರ‍್ಯಾಲಿ ಆಯೋಜಿಸಿತ್ತು. ರ‍್ಯಾಲಿಯಲ್ಲಿ ಮಹಿಳೆಯರು ಭಾಗವಹಿಸಿದ್ದು, ರಾಜ್ಯದ ಇತರ ಹೆಣ್ಣು ಮಕ್ಕಳಲ್ಲಿ ಧೈರ್ಯ ಮೂಡಿಸಿದ್ದಾರೆ.
ಕೇಂದ್ರ ಸರ್ಕಾರ ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದೆ. ಇದು ದೇಶದ ಏಕತೆ ಹಾಗೂ ಸಮಗ್ರತೆಗೆ ದೊಡ್ಡ ಮೈಲುಗಲ್ಲು ಆಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದರು. ಆ ಬಳಿಕ ರಾಜ್ಯದ ಒಂದೊಂದೇ ಕ್ಷೇತ್ರದಲ್ಲಿ ಕೆಲ ಬೆಳವಣಿಗೆಗಳು ಕಂಡು ಬರುತ್ತಿವೆ. ಇದೀಗ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಜಮ್ಮುವಿನ ಮಹಿಳೆಯರು ನಾವ್ಯಾರಿಗೂ ಕಮ್ಮಿಯಿಲ್ಲ ಎಂದು ಭಾಗವಹಿಸಿರುವುದು ಕೂಡ ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.