ವೈಜಾಗ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಾಳೆ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ಮೊದಲ ಪಂದ್ಯದಲ್ಲಿ ಕೆರಿಬಿಯನ್ ಪಡೆ ಗೆಲುವು ಸಾಧಿಸಿರುವ ಕಾರಣ ಮೂರು ಪಂದ್ಯಗಳ ಸರಣಿ ಜೀವಂತವಾಗಿರಿಸಿಕೊಳ್ಳಬೇಕಾದರೆ ಟೀಂ ಇಂಡಿಯಾ ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಲು ಮಾಸ್ಟರ್ ಪ್ಲಾನ್ ಹಾಕಿಕೊಂಡಿರುವ ಕೊಹ್ಲಿ ಪಡೆ ನೆಟ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದು, ತಂಡದಿಂದ ಹೊರಗುಳಿದಿರುವ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಕೈಯಿಂದ ಬೌಲಿಂಗ್ ಮಾಡಿಸಿಕೊಂಡಿದೆ. ಬೆನ್ನು ನೋವಿನ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ವೇಗದ ಬೌಲರ್ ಬುಮ್ರಾ ಇದೀಗ ಚೇತರಿಸಿಕೊಳ್ಳುತ್ತಿದ್ದು ನೆಟ್ನಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ.
ಇದೇ ಪೋಟೋವನ್ನ ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಟ್ವೀಟರ್ ಅಕೌಂಟ್ನಲ್ಲಿ ಶೇರ್ ಮಾಡಿದ್ದು, ನೋಡಿ ಯಾರು ಮೈದಾನದಲ್ಲಿದ್ದಾರೆ ಎಂದು ಬರೆದುಕೊಂಡಿದೆ. ಇನ್ನು ಯಂಗ್ ಪ್ಲೇಯರ್ ಪೃಥ್ವಿ ಶಾ ಕೂಡ ಇದೇ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ.