ETV Bharat / bharat

ನೀಟ್-ಜೆಇಇ: ಸುಪ್ರೀಂಗೆ ಆರು ರಾಜ್ಯಗಳಿಂದ ಮರುಪರಿಶೀಲನಾ ಅರ್ಜಿ ಸಲ್ಲಿಕೆ

author img

By

Published : Aug 28, 2020, 3:46 PM IST

ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 17 ರಂದು ವಜಾಗೊಳಿಸಿತ್ತು. ಈ ಅರ್ಜಿಯನ್ನು ಮರುಪರಿಶೀಲಿಸುವಂತೆ ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ, ಛತ್ತೀಸ್​ಗಢ, ಪಂಜಾಬ್ ಮತ್ತು ಮಹಾರಾಷ್ಟ್ರದ ಸಚಿವರು ಸುಪ್ರೀಂ​ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

SC
ಸುಪ್ರೀಂ ಕೋರ್ಟ್

ನವದೆಹಲಿ: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ ಸಂಬಂಧ ಆರು ರಾಜ್ಯಗಳು ಸುಪ್ರೀಂಕೋರ್ಟ್​ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿವೆ.

2020 ರ ಸೆಪ್ಟೆಂಬರ್‌ನಲ್ಲಿ ನಡೆಯಬೇಕಾಗಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 17 ರಂದು ವಜಾಗೊಳಿಸಿತ್ತು. ಈ ಅರ್ಜಿಯನ್ನು ಮರುಪರಿಶೀಲಿಸುವಂತೆ ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ, ಛತ್ತೀಸ್​ಗಢ, ಪಂಜಾಬ್ ಮತ್ತು ಮಹಾರಾಷ್ಟ್ರದ ಸಚಿವರು ಅರ್ಜಿ ಸಲ್ಲಿಸಿದ್ದಾರೆ.

ಕೋವಿಡ್​ ಹಾವಳಿ ಮಧ್ಯೆ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವು ಕೇಂದ್ರ ಸರ್ಕಾರದ ನಿರ್ಧಾರವನ್ನು ಹಲವಾರು ಪಕ್ಷಗಳ ನಾಯಕರು ವಿರೋಧಿಸಿದ್ದಾರೆ. ಪರೀಕ್ಷೆಗಳ ಮುಂದೂಡಿಕೆಗೆ ಸರ್ಕಾರವನ್ನು ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್​ ಇಂದು ಪ್ರತಿಭಟನೆ ಕೂಡ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.