ನವದೆಹಲಿ: 2021ನೇ ವರ್ಷದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ದಿನಾಂಕವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪರೀಕ್ಷೆಯನ್ನು ಐಐಟಿ ಖರಗ್ಪುರದಿಂದ ಜುಲೈ 3, 2021ರಂದು ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ, ಪರೀಕ್ಷೆಗೆ ಇದ್ದ ಶೇಕಡಾ 75ರಷ್ಟು ಅರ್ಹತಾ ಮಾನದಂಡಗಳನ್ನು ಸಹ ರದ್ದುಪಡಿಸಲಾಗಿದೆ. ಕೊರೊನಾ ಸೋಂಕಿನಿಂದಾಗಿ 2020ರ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ಅಭ್ಯರ್ಥಿಗಳಿಗೆ ನೇರವಾಗಿ 2021ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿದೆ.
ಈ ರೀತಿಯ ಅವಕಾಶವನ್ನು ನೀಡಿರುವ ಕಾರಣದಿಂದ ಪರೀಕ್ಷೆಗೆ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.