ನವದೆಹಲಿ: ಕ್ಯಾಂಪಸ್‌ನಲ್ಲಿ ಶಾಂತಿ ಕಾಪಾಡುವಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಉಪಕುಲಪತಿ ಎಂ.ಜಗದೇಶ್ ಕುಮಾರ್, ಎಲ್ಲಾ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಮುಖಕ್ಕೆ ಮಾಸ್ಕ್ ಧರಿಸಿ ಜೆಎನ್ಯು ವಿದ್ಯಾರ್ಥಿ, ಶಿಕ್ಷಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ!
ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವುದು ಮೊದಲ ಆದ್ಯತೆಯಾಗಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯವು ಎಲ್ಲಾ ವಿದ್ಯಾರ್ಥಿಗಳೊಂದಿಗಿದೆ. ಚಳಿಗಾಲದ ಸೆಮಿಸ್ಟರ್ ನೋಂದಣಿ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತದೆ. ಎಲ್ಲಾ ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕೆಂದು ಎಂ.ಜಗದೇಶ್ ಕುಮಾರ್ ಮನವಿ ಮಾಡಿದರು.
JNU ಹಿಂಸಾಚಾರ ಖಂಡಿಸಿ ಗೇಟ್ವೇ ಆಫ್ ಇಂಡಿಯಾ ಎದುರು ಪ್ರತಿಭಟನೆ
ಘಟನೆಯಿಂದ ಯಾರೂ ಹೆದರಬೇಕಾಗಿಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.