ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಜೆ.ಪಿ. ನಡ್ಡಾ ಟ್ವೀಟ್ ಮಾಡಿದ್ದು, ರೋಗ ಲಕ್ಷಣಗಳಿದ್ದ ಕಾರಣದ ಪರೀಕ್ಷೆ ಮಾಡಿಸಿದ್ದು, ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಫೈಜರ್ ಲಸಿಕೆ: ಸೋಮವಾರದಿಂದ ಅಮೆರಿಕದ ಎಲ್ಲ ರಾಜ್ಯಗಳಿಗೆ ಹಂಚಿಕೆ
ಇದರ ಜೊತೆಗೆ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲೇ ಐಸೋಲೇಷನ್ಗೆ ಒಳಪಟ್ಟಿದ್ದು, ನನ್ನ ಆರೋಗ್ಯ ಉತ್ತಮವಾಗಿದೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.