ಭೋಪಾಲ್ (ಮಧ್ಯಪ್ರದೇಶ): ಕ್ಷಣ ಕ್ಷಣಕ್ಕೂ ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆಗಳು ಹೊಸ ತಿರುವು ಪಡೆಯುತ್ತಿವೆ. ಒಂದೆಡೆ ಮಧ್ಯಪ್ರದೇಶ ಸರ್ಕಾರ ಉರುಳುವ ಹಂತದಲ್ಲಿದ್ದರೆ, ಮತ್ತೊಂದೆಡೆ ಜ್ಯೋತಿರಾದಿತ್ಯ ಸಿಂಧಿಯಾ ಇದೀಗ ಬಿಜೆಪಿ ಸೇರಿಕೊಂಡಿದ್ದಾರೆ.
ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ, ಪಕ್ಷಕ್ಕೆ ಬರಮಾಡಿಕೊಂಡಿದ್ದು, ಹೂಗುಚ್ಛ ನೀಡಿ, ಶಾಲು ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಇದೇ ವೇಳೆ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಂಧಿಯಾ ಧನ್ಯವಾದ ತಿಳಿಸಿದ್ದಾರೆ.
ಓದಿ : ಕಮಲನಾಥ್ ಸರ್ಕಾರ ಉರುಳುತ್ತಾ? ಮೋದಿ ಭೇಟಿ ಮಾಡಿದ ಜ್ಯೋತಿರಾದಿತ್ಯ ಸಿಂದಿಯಾ!
ನಿನ್ನೆ ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ಸೇರ್ಪಡೆ ಆಗುವ ಸಂಬಂಧ ಮಾತುಕತೆ ನಡೆಸಿದ್ದರು. ಬಳಿಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮುಖಂಡೆ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಚಿಕ್ಕಮ್ಮ ಯಶೋಧರಾ, ಅವರು ಘರ್ ವಾಪಸಿ ಆಗುತ್ತಿರುವುದು ಸಂತಸ ತಂದಿದೆ ಎಂದಿದ್ದರು.