ಎರ್ನಾಕುಲಂ/ಕೇರಳ: ಕಲಾಮಸ್ಸೆರಿ ವೈದ್ಯಕೀಯ ಕಾಲೇಜನ್ನು ಕೋವಿಡ್-19 ವೈದ್ಯಕೀಯ ಕೇಂದ್ರವಾಗಿ ಮಾಡಲಾಗಿದೆ. ಕೊರೊನಾ ಹರಡುವಿಕೆ ಹಿನ್ನೆಲೆ ಈ ಆಸ್ಪತ್ರೆಯನ್ನು ತುರ್ತು ಚಿಕಿತ್ಸಾ ಕೇಂದ್ರವಾಗಿ ಘೋಷಿಸಲಾಗಿದ್ದು, ಎಮರ್ಜೆನ್ಸಿ ಕೇಸ್ಗಳನ್ನು ಮಾತ್ರ ದಾಖಲಿಸಿಕೊಳ್ಳಲಾಗ್ತಿದೆ.
ಈ ಹಿನ್ನೆಲೆ ಕಲಾಮಸ್ಸೆರಿ ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳು, ಗರ್ಭಿಣಿಯರು, ಮಕ್ಕಳನ್ನು ಜಿಲ್ಲೆಯ ಇನ್ನಿತರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಸ್. ಸುಹಾಸ್, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೊರೊನಾ ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದು, ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿರುವ ರೋಗಿಗಳನ್ನು ಆಳುವ ಜಿಲ್ಲಾ ಆಸ್ಪತ್ರೆ, ಕದವಂತ್ರ ಇಂದಿರಾಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ವೈದ್ಯಕೀಯ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ರು.
ಕೇರಳದಲ್ಲಿ ಸುಮಾರು 55 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು,ಈ ಹಿನ್ನೆಲೆ ವೈರಸ್ ಹರಡದಂತೆ ನಿಯಂತ್ರಿಸಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.