ETV Bharat / bharat

ನಟಿ ಕಂಗನಾ ರಣಾವತ್​ ನಿವಾಸದ ಬಳಿ ಗುಂಡಿನ ದಾಳಿ

ಬಾಲಿವುಡ್​ ನಟಿ ಕಂಗನಾ ರಣಾವತ್​ ನಿವಾಸದ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

kangana Ranaut
kangana Ranaut
author img

By

Published : Aug 1, 2020, 6:38 PM IST

ಮನಾಲಿ (ಹಿಮಾಚಲ ಪ್ರದೇಶ): ಕಳೆದ ಕೆಲ ತಿಂಗಳಿಂದ ಬಾಲಿವುಡ್​ ನಟಿ ಕಂಗನಾ ರಣಾವತ್​ ಕುಟುಂಬದೊಂದಿಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ನಿವಾಸದಲ್ಲಿ ವಾಸವಾಗಿದ್ದು, ಇಂದು ಬೆಳಗ್ಗೆ 11:30ರ ವೇಳೆ ನಿವಾಸದ ಪಕ್ಕದಲ್ಲೇ ಗುಂಡಿನ ದಾಳಿ ನಡೆದಿದೆ.

ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಕಂಗನಾ ಹೇಳಿದ್ದು, ಇಂತಹ ಬೆದರಿಕೆಗಳಿಗೆ ತಾವು ಹೆದರುವುದಿಲ್ಲ ಎಂದಿದ್ದಾರೆ. ನನ್ನ ಬೆದರಿಸುವ ಉದ್ದೇಶದಿಂದ ಈ ರೀತಿಯಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.

kangana Ranaut
ಕಂಗನಾ ರಣಾವತ್​ ನಿವಾಸ

ಪೊಲೀಸರು ಸ್ಥಳಕ್ಕಾಗಮಿಸಿ ತಪಾಸಣೆ ನಡೆಸಿದಾಗ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ. ಆದರೆ ಅವರ ನಿವಾಸದ ಸುತ್ತಲೂ ಭದ್ರತೆ ಹೆಚ್ಚಿಸಲಾಗಿದೆ.

ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಆತ್ಮಹತ್ಯೆ ಮಾಡಿಕೊಂಡ ಬಳಿಕ ಕಂಗನಾ ಅನೇಕ ರೀತಿಯ ಹೇಳಿಕೆ ನೀಡಿದ್ದು, ಇದೇ ಕಾರಣಕ್ಕಾಗಿ ದುಷ್ಕರ್ಮಿಗಳು ಬೆದರಿಸುವ ಪ್ರಯತ್ನ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.