ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2020ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಮೊದಲನೇ ವರ್ಷದ ಮೊದಲನೇ ಸೆಮಿಸ್ಟರ್ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸುಗಳು ಮತ್ತು ಬಿ ಫಾರ್ಮಾ ಮತ್ತು ಫಾರ್ಮಾ ಡಿ ಕೋರ್ಸುಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.
- 30-7-2020ರಂದು ಜೀವಶಾಸ್ತ್ರ, ಗಣಿತಶಾಸ್ತ್ರ
- 31-7-2020ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ
- 01-8-2020ರಂದು ಕನ್ನಡ ಭಾಷಾ ಪರೀಕ್ಷೆ( ಬೆಂಗಳೂರು ಕೇಂದ್ರದಲ್ಲಿ ಮಾತ್ರ)
60 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10-30ರಿಂದ 11-50, ಮಧ್ಯಾಹ್ನ 2-30ರಿಂದ 3-50ರವರೆಗೆ ಪರೀಕ್ಷಾ ಸಮಯ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ಸೈಟ್ kea.kar.nic.inಗೆ ಭೇಟಿ ನೀಡಬಹುದು.