ನವದೆಹಲಿ: ಕರ್ನಾಟಕ ವಿಧಾನಸಭೆಯ 13 ಅತೃಪ್ತ ಶಾಸಕರ ರಾಜೀನಾಮೆಯಿಂದ ಉದ್ಭವಿಸಿರುವ ರಾಜಕೀಯ ಪ್ರಕ್ಷುಬ್ಧತೆ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸದಿಂದ ಹಿಂದುರುಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಸಂಜೆ ವೇಳೆಗೆ ಬೆಂಗಳೂರು ತಲುಪುವ ನಿರೀಕ್ಷೆ ಇದೆ.
ಈಗಾಗಲೇ ಸಿಎಂ ಕುಮಾರಸ್ವಾಮಿ ದೆಹಲಿ ತಲುಪಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಏರ್ ಇಂಡಿಯಾ ವಿಮಾನ ಹಾರಾಟದಲ್ಲಿ ಎರಡು ಗಂಟೆ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ. ಎರಡು ಗಂಟೆ ಕಾಯುವಷ್ಟು ತಾಳ್ಮೆ ಕಳೆದುಕೊಂಡ ಕುಮಾರಸ್ವಾಮಿ, ವಿಶೇಷ ವಿಮಾನದ ಮೂಲಕ ಸಂಜೆ 6 ಗಂಟೆಯ ವೇಳೆಗೆ ಹೆಚ್ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಆಗಮನದ ಬಳಿಕ ರಾಜ್ಯ ರಾಜಕೀಯ ಚಟುವಟಿಕೆ ತೀವ್ರವಾಗಲಿವೆ. ರಾಜೀನಾಮೆ ಸಲ್ಲಿಸಿದ ಅತೃಪ್ತರ ಮುಖಂಡತ್ವ ವಹಿಸಿರುವ ರಾಮಲಿಂಗಾರೆಡ್ಡಿ ಅವರ ಜೊತೆಗೆ ಸಿಎಂ ನಿರಂತರ ಸಂಪರ್ಕದಲ್ಲಿದ್ದಾರೆ. ಇಲ್ಲಿನ ಪ್ರತಿಯೊಂದು ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎನ್ನಲಾಗುತ್ತಿದೆ.