ETV Bharat / bharat

ರಾಜಸ್ಥಾನದಲ್ಲಿ ಆತ್ಮಹತ್ಯೆಗೆ ಶರಣಾದ ಕರ್ನಾಟಕ ಮೂಲದ ಸೈನಿಕ - Indian Army news

ಸೇನೆಯಲ್ಲಿ ಕಾರು ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ಮೂಲದ ಸಿದ್ಧ ಮಲ್ಲಪ್ಪ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಜಸ್ಥಾನದ ಅಲ್ವಾರ್​​​ನಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Karnataka-resident soldier who committed suicide in Rajasthan
ರಾಜಸ್ಥಾನದಲ್ಲಿ ಆತ್ಮಹತ್ಯೆಗೆ ಶರಣಾದ ಕರ್ನಾಟಕ ಮೂಲದ ಸೈನಿಕ
author img

By

Published : Nov 17, 2020, 8:33 AM IST

ಅಲ್ವಾರ್​ (ರಾಜಸ್ಥಾನ್): ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ಮೂಲದ ಸೈನಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಅಲ್ವಾರ್​​ನ ಉದ್ಯೋಗ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಸೈನಿಕ ಕರ್ನಾಟಕ ಮೂಲದ ಸಿದ್ದ ಮಲ್ಲಪ್ಪ (37) ಎಂದು ಪೊಲೀಸರು ಮಾಹಿತಿ ನೀಡಿದ್ದು, ಈತ ಇಟಾ ರಾಣಾ ಕಂಟೋನ್ಮೆಂಟ್​​​ನಲ್ಲಿ ಕಾರು ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ. ಕೆಲಸ ಮುಗಿಸಿ ಆರ್ಮಿ ಕ್ವಾಟ್ರಸ್​ಗೆ ಆಗಮಿಸಿದ ಇತರೆ ಸಹೋದ್ಯೋಗಿಗಳು ಸಿದ್ಧ ಮಲ್ಲಪ್ಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಬಳಿಕ ಅಲ್ವಾರ್​ನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕುಟುಂಬಸ್ಥರ ಆಗಮನದ ಬಳಿಕ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಸೈನಿಕನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕೌಟುಂಬಿಕ ಕಲಹದಿಂದ ಬೇಸತ್ತು ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.