ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿರುವ ಸಿಎಂ ಕುಮಾರಸ್ವಾಮಿ ಹಾಗೂ ಆಂಧ್ರ ಪ್ರದೇಶ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಜಗನ್, ವೆಂಕಟೇಶ್ವರ ಸ್ವಾಮಿ ಫೋಟೋವನ್ನು ಸ್ಮರಣಿಕೆಯಾಗಿ ನೀಡಿದರು. ಕುಮಾರಸ್ವಾಮಿ ಸಹ ಹೂಗುಚ್ಛ ನೀಡಿ, ಜಗನ್ರಿಗೆ ಶುಭಾಷಯ ಕೋರಿದರು.
ಉಭಯ ನಾಯಕರು ಕೆಲಕಾಲ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.