ETV Bharat / bharat

ಕೇರಳದಲ್ಲಿ ಕೋವಿಡ್​ ಕೇಸ್​ಗಳು ಹೆಚ್ಚಳ... ಹಾಟ್​ಸ್ಪಾಟ್​ಗಳಲ್ಲಿ ಪೊಲೀಸರ ನಿಯೋಜನೆ - ಹಾಟ್​ಸ್ಪಾಟ್​ಗಳಲ್ಲಿ ಪೊಲೀಸರ ನಿಯೋಜನೆ

ಕೇರಳದಲ್ಲಿ ಕೋವಿಡ್ ನಿಯಂತ್ರಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಪೊಲೀಸ್​ ಇಲಾಖೆ ಮೂಲಕ ಈಗಾಗಲೇ ಜನತೆಗೆ ಮಾಹಿತಿಯನ್ನು ನೀಡಿದ್ದೇವೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮಲಪ್ಪುರಂ ಎಸ್​ಪಿ ಅಬ್ದುಲ್ ಕರೀಂ ತಿಳಿಸಿದ್ದಾರೆ.

covid
ಯೋಜನೆ
author img

By

Published : Jan 31, 2021, 2:41 PM IST

ಮಲಪ್ಪುರಂ (ಕೇರಳ): ರಾಜ್ಯದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನತೆ ಕೊರೊನಾ ನಿಯಮ ಅನುಸರಿಸುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಹಾಗಾಗಿಯೇ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಸದ್ಯ ಕೇರಳದಲ್ಲಿ 72,482 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್​​ ನಿಯಂತ್ರಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಪೊಲೀಸ್​ ಇಲಾಖೆ ಮೂಲಕ ಈಗಾಗಲೇ ಜನತೆಗೆ ಮಾಹಿತಿ ನೀಡಿದ್ದೇವೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮಲಪ್ಪುರಂ ಎಸ್​ಪಿ ಅಬ್ದುಲ್ ಕರೀಂ ತಿಳಿಸಿದ್ದಾರೆ.

ಪೊಲೀಸರು ಜಿಲ್ಲೆಯ ಕೆಲ ಕೋವಿಡ್ ಹಾಟ್​ಸ್ಪಾಟ್​ಗಳನ್ನು ಗುರುತಿಸಿಕೊಂಡಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ವ್ಯವಸ್ಥೆ ಫೆಬ್ರವರಿ 10ರವರೆಗೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ, ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಉಪ ವಿಭಾಗೀಯ ಅಧಿಕಾರಿಗಳು ಮತ್ತು ಸ್ಟೇಷನ್ ಹೌಸ್ ಅಧಿಕಾರಿಗಳಿಗೆ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಅಗತ್ಯವಿದ್ದರೆ ಪೊಲೀಸರನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ವಿಜಯ್ ಸಖಾರೆ ಕೋವಿಡ್ ನಿಯಂತ್ರಣದ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.