ತಿರುವನಂತಪುರಂ: ಮಂಗಳೂರಿನಲ್ಲಿ ಕೇರಳ ಮೂಲದ 25ಕ್ಕೂ ಹೆಚ್ಚು ಪತ್ರಕರ್ತರನ್ನು ಬಂಧಿಸಿರುವ ಕುರಿತು ಕೇರಳದ ಕಂದಾಯ ಸಚಿವ ಇ.ಚಂದ್ರಶೇಖರನ್ ಪ್ರತಿಕ್ರಿಯಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕೇರಳ ಪತ್ರಕರ್ತರನ್ನು ಮಂಗಳೂರಿನ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದ ನಂತರ, ಈ ಕುರಿತು ಕರ್ನಾಟಕ ಸರ್ಕಾರವನ್ನು ಸಂಪರ್ಕಿಸಿ ಅದರ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಲು ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸುತ್ತೇನೆ ಎಂದು ಕಂದಾಯ ಸಚಿವ ಇ.ಚಂದ್ರಶೇಖರನ್ ತಿಳಿಸಿದ್ದಾರೆ.