ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಇಂದು ನಡೆದಿದೆ. ಈ ಕಾರ್ಯಕ್ರಮದಲ್ಲಿ ಮುಂಬರುವ ಜೆಇಇ ಮತ್ತು ನೀಟ್ ಪರೀಕ್ಷೆಗಳ ಕುರಿತು ಪ್ರಧಾನಿ ಮಾತನಾಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು, ಮನ್ ಕಿ ಬಾತ್‌ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳ ಕುರಿತು ಮಾತನಾಡುತ್ತಾರೆ ಎಂದು ನಿರೀಕ್ಷಿಸಿದ್ದರು. ಆದರೆ ಅವರು ಆಟಿಕೆಗಳ ಉತ್ಪಾದನೆ ಕುರಿತು ಮಾತನಾಡಿ ಎಲ್ಲರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದರು.
-
JEE-NEET aspirants wanted the PM do ‘Pariksha Pe Charcha’ but the PM did ‘Khilone Pe Charcha’.#Mann_Ki_Nahi_Students_Ki_Baat
— Rahul Gandhi (@RahulGandhi) August 30, 2020 " class="align-text-top noRightClick twitterSection" data="
">JEE-NEET aspirants wanted the PM do ‘Pariksha Pe Charcha’ but the PM did ‘Khilone Pe Charcha’.#Mann_Ki_Nahi_Students_Ki_Baat
— Rahul Gandhi (@RahulGandhi) August 30, 2020JEE-NEET aspirants wanted the PM do ‘Pariksha Pe Charcha’ but the PM did ‘Khilone Pe Charcha’.#Mann_Ki_Nahi_Students_Ki_Baat
— Rahul Gandhi (@RahulGandhi) August 30, 2020
ಪ್ರಧಾನಿ, ದೇಶೀಯವಾಗಿ ಆಟಿಕೆಗಳ ಉತ್ಪಾದನೆ ಹಾಗೂ ರಫ್ತಿನ ಕುರಿತು ಚರ್ಚೆ ಮಾಡಿದ್ದಾರೆ. ಜಾಗತಿಕ ಆಟಿಕೆ ವ್ಯಾಪಾರ ಸುಮಾರು 7 ಲಕ್ಷ ಕೋಟಿ ರೂ.ಗಳಷ್ಟಿದ್ದು, ಇದರಲ್ಲಿ ಭಾರತದ ಪಾಲು ಅತ್ಯಂತ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ನಾವು ದೇಶೀಯ ಆಟಿಕೆ ವಸ್ತುಗಳ ಉತ್ಪಾದನೆಯತ್ತ ಗಮನಹರಿಸಬೇಕಿದೆ ಎಂದು ಹೇಳಿದ್ದಾರೆ.
ಇನ್ನು ಜೆಇಇ ಮತ್ತು ನೀಟ್ ಪರೀಕ್ಷೆಗಳು ಸೆಪ್ಟೆಂಬರ್ನಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳನ್ನು ಮುಂದೂಡುವಂತೆ ವಿಪಕ್ಷಗಳು ಪ್ರತಿಭಟನೆ ನಡೆಸಿವೆ.