ಜೈಪುರ: ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ಕಿಸಾನ್ ಆಂದೋಲನದಲ್ಲಿ ಭಾಗಿಯಾಗಿದ್ದ ಕಿಸಾನ್ ಮಹಾಸಭಾ ನಾಯಕ ರಾಂಪಾಲ್ ಜಾಟ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಜೈಪುರದ ಎಸ್ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ಕಿಸಾನ್ ಆಂದೋಲನದಲ್ಲಿ ಹಠಾತ್ತನೆ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ಬಹ್ರೋದ್- ಆಂಕರ್- ಕಿಸಾನ್ ಮಹಾಸಭಾ ನಾಯಕ ರಾಂಪಾಲ್ ಜಾಟ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ತೀವ್ರ ಏರು-ಪೇರು ಉಂಟಾಗಿದೆ. ರಾಂಪಾಲ್ ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ಬಳಿಕ ಹಠಾತನೆ ಅನಾರೋಗ್ಯಕ್ಕೆ ಒಳಗಾಗಿದ್ದರು.
ಅವರಲ್ಲಿ ಇಂದು ಬಿಪಿ ಅಧಿಕವಾಗಿದ್ದ ಕಾರಣ ಅಸ್ವಸ್ಥ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.
ಇದನ್ನೂ ಓದಿ: ಕುಡಿದು ವಾಹನ ಚಲಾಯಿಸುವವರು ಭಯೋತ್ಪಾದಕರು: ಸಜ್ಜನ್ ಖಡಕ್ ಮಾತು