ನವದೆಹಲಿ: ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ ಜಾಧವ್ ತೀವ್ರ ಒತ್ತಡದಲ್ಲಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
-
MEA: We"ll decide a further course of action after receiving a detailed report from our Charge d’ Affaires and determining the extent of conformity to the ICJ directives. External Affairs Minister has spoken to the mother of #KulbhushanJadhav & briefed her of today’s developments https://t.co/N3UlP5Hu02
— ANI (@ANI) September 2, 2019 " class="align-text-top noRightClick twitterSection" data="
">MEA: We"ll decide a further course of action after receiving a detailed report from our Charge d’ Affaires and determining the extent of conformity to the ICJ directives. External Affairs Minister has spoken to the mother of #KulbhushanJadhav & briefed her of today’s developments https://t.co/N3UlP5Hu02
— ANI (@ANI) September 2, 2019MEA: We"ll decide a further course of action after receiving a detailed report from our Charge d’ Affaires and determining the extent of conformity to the ICJ directives. External Affairs Minister has spoken to the mother of #KulbhushanJadhav & briefed her of today’s developments https://t.co/N3UlP5Hu02
— ANI (@ANI) September 2, 2019
ಪಾಕಿಸ್ತಾನದಲ್ಲಿರುವ ಭಾರತದ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಇಂದು ಕುಲಭೂಷಣ್ ಜಾಧವ್ ಅವರನ್ನ ಭೇಟಿ ಮಾಡಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಗೌರವ್ ಅಹ್ಲುವಾಲಿಯಾ ಭೇಟಿ ನಂತರ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ, ಪಾಕ್ ಹೇಳಿಕೊಡುತ್ತಿರುವ ಸುಳ್ಳು ಗಿಳಿ ಪಾಠವನ್ನ ಒಪ್ಪಲಾಗದೆ ಕುಲಭೂಷಣ್ ಜಾಧವ್ ತೀವ್ರ ಒತ್ತಡದಲ್ಲಿದ್ದಾರೆ. ಈ ಬಗ್ಗೆ ಸಮಗ್ರವಾದ ವರದಿಯನ್ನ ಪಡೆದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದಿದೆ.
ಇನ್ನು ವಿದೇಶಾಂಗ ಸಚಿವ ಜೈಶಂಕರ್, ಜಾಧವ್ ಅವರ ತಾಯಿಯೊಂದಿಗೆ ಮಾತನಾಡಿದ್ದಾರೆ. ಇಂದು ನಡೆದ ಚರ್ಚೆಯ ಬಗ್ಗೆ ಮಾಹಿತಿ ನೀಡಿದ್ದಾರೆ.