ETV Bharat / bharat

ಕುಪ್ವಾರಾ ಎನ್​ಕೌಂಟರ್​ನಲ್ಲಿ ಮೂವರು ಉಗ್ರರು ಹತ: ಲೆಫ್ಟಿನೆಂಟ್​ ಕರ್ನಲ್​ ಸೇರಿ ನಾಲ್ವರು ಯೋಧರು ಹುತಾತ್ಮ - ಲೆಫ್ಟಿನೆಂಟ್​ ಕರ್ನಲ್​ ಸೇರಿ ಮೂವರು ಯೋಧರು ಹುತಾತ್ಮ

ಕುಪ್ವಾರಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಆದರೆ ಲೆಫ್ಟಿನೆಂಟ್​ ಕರ್ನಲ್​ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

Jammu and Kashmir
ಕುಪ್ವಾರಾ ಎನ್​ಕೌಂಟರ್
author img

By

Published : Nov 8, 2020, 3:00 PM IST

Updated : Nov 8, 2020, 3:57 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದ್ದರೆ, ನಮ್ಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ತಡರಾತ್ರಿ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮೂಲಕ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದದ್ದನ್ನು ಗಮನಿಸಿದ ಭಾರತೀಯ ಸೇನೆ ಉಗ್ರರ ದಮನಕ್ಕೆ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ.

ತಕ್ಷಣವೇ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು. ಆದರೆ ಕಾನ್​ಸ್ಟೇಬಲ್​​ ಸುದೀಪ್​​ ಸರಕಾರ್ ಹುತಾತ್ಮರಾದರು. ಇದೀಗ ಘಟನೆಯಲ್ಲಿ ಒಟ್ಟು ಲೆಫ್ಟಿನೆಂಟ್​ ಕರ್ನಲ್​ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಸೇನೆ ಸದೆಬಡಿದಿದೆ. ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : Nov 8, 2020, 3:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.