ETV Bharat / bharat

3.5 ಕೋಟಿ ಕಟ್ಟಡ ಕಾರ್ಮಿಕರಿಗೆ ಸಹಾಯ ಧನ ನೀಡಲು ರಾಜ್ಯಗಳಿಗೆ ಕೇಂದ್ರದ ನಿರ್ದೇಶನ..

ಕೋವಿಡ್​-19 ಬಿಕ್ಕಟ್ಟಿನಿಂದ ಜೀವನೋಪಾಯಕ್ಕಾಗಿ ಪರದಾಡುತ್ತಿರುವ ಕಟ್ಟಡ ಕಾರ್ಮಿಕರ ಬೆಂಬಲಕ್ಕೆ ನಿಂತಿರುವ ಕೇಂದ್ರ ಸರ್ಕಾರ, ಎಲ್ಲ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಸೂಕ್ತ ಪ್ರಮಾಣದ ಹಣ ಸಂದಾಯ ಮಾಡುವಂತೆ ಎಲ್ಲ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

Breaking News
author img

By

Published : Mar 25, 2020, 11:37 AM IST

ಹೊಸದಿಲ್ಲಿ : ದೇಶದಲ್ಲಿನ 3.5 ಕೋಟಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಕ್ಷಣ ಸಹಾಯ ಧನ ಬಿಡುಗಡೆ ಮಾಡಬೇಕೆಂದು ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ್ದಾರೆ. ಕೋವಿಡ್​-19ನಿಂದ ದೇಶಾದ್ಯಂತ ಲಾಕ್​ಡೌನ್​ ವಿಧಿಸಲಾಗಿದ್ದರಿಂದ ಕೆಲಸ ಕಳೆದುಕೊಂಡು ಆದಾಯರಹಿತರಾಗಿರುವ ಕಾರ್ಮಿಕರ ಜೀವನೋಪಾಯಕ್ಕಾಗಿ ಈ ಕ್ರಮಕೈಗೊಳ್ಳಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಇತರೆ ಕಾರ್ಮಿಕರ 1996ರ ಕಾಯ್ದೆ 60ರ ಪ್ರಕಾರ, ಸೆಕ್ಷನ್ 22(1) (h) ಕಾಯ್ದೆಯಡಿ ಈ ನಿರ್ದೇಶನ ಹೊರಡಿಸಲಾಗಿದೆ. ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ ತುರ್ತಾಗಿ ಅಗತ್ಯವಿರುವಷ್ಟು ಮೊತ್ತ ಜಮೆ ಮಾಡುವಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ಸಂಗ್ರಹ ಮಾಡಲಾದ ಸೆಸ್​ ಮೊತ್ತದಿಂದ ಕಾರ್ಮಿಕರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡುವಂತೆ ನಿರ್ದೇಶಿಸಲಾಗಿದೆ.

ಪ್ರಸ್ತುತ ದೇಶದಲ್ಲಿ 52 ಸಾವಿರ ಕೋಟಿ ರೂಪಾಯಿ ಸೆಸ್​ ಮೊತ್ತ ಸಂಗ್ರಹವಿದೆ. ಎಷ್ಟು ಮೊತ್ತ ನೀಡಬೇಕೆಂಬುದನ್ನು ನಿರ್ಧರಿಸುವ ವಿವೇಚನೆಯನ್ನು ಆಯಾ ರಾಜ್ಯ ಸರ್ಕಾರಗಳಿಗೇ ಬಿಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.