ಇಸ್ಲಮಾಬಾದ್: ಕಳೆದ ವರ್ಷ ನವೆಂಬರ್ನಲ್ಲಿ ಪಾಕ್ ಸಾಗರ ಭದ್ರತಾ ಸಂಸ್ಥೆಯಿಂದ ಬಂಧನಕ್ಕೊಳಗಾಗಿದ್ದ 20 ಭಾರತೀಯ ಮೀನುಗಾರರನ್ನು ಇಂದು ಪಾಕ್ ಸರ್ಕಾರ ಭಾರತಕ್ಕೆ ಹಸ್ತಾಂತರ ಮಾಡಿದೆ.
ಎಲ್ಲ ಮೀನುಗಾರರು ಅಟ್ಟಾರಿ-ವಾಘಾ ಗಡಿ ಮೂಲಕ ತಾಯ್ನಾಡಿಗೆ ಆಗಮಿಸಿದ್ದಾರೆ. ಪಾಕ್ ಸಮುದ್ರ ಸರಹದ್ದಿನಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ್ದ ಆರೋಪದ ಮೇಲೆ ಈ ಮೀನುಗಾರರು ಬಂಧನಕ್ಕೊಳಗಾಗಿದ್ದರು. ಇದಾದ ಬಳಿಕ ಇವರನ್ನ ಲಾಹೋರ್ನ ಮರ್ಲಿರ್ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿ ಇರಿಸಿತ್ತು. ಇಂದು ಸಂಜೆ 6 ಗಂಟೆಗೆ ಈ ಮೀನುಗಾರರನ್ನ ಭಾರತೀಯ ಯೋಧರಗೆ ಹಸ್ತಾಂತರ ಮಾಡಲಾಗಿದೆ.
ಇನ್ನು 189 ಭಾರತೀಯ ಮೀನುಗಾರರು ಪಾಕ್ ವಶದಲ್ಲಿದ್ದು, ಅವರ ಬಿಡುಗಡೆಗಾಗಿ ಉಭಯ ದೇಶಗಳ ನಡುವೆ ಮಾತುಕತೆ ನಡೆದಿದೆ.