ರಾಂಚಿ (ಜಾರ್ಖಂಡ್): ಆರ್‌ಜೆಡಿ ಹಿರಿಯ ನಾಯಕ ಲಾಲೂ ಪ್ರಸಾದ್ ಯಾದವ್ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿ ಕೆಲ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಾಗೃಹದ ನಿಯಮಗಳನ್ನು ಉಲ್ಲಂಘಿಸಿ ದರ್ಬಾರ್ ನಡೆಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಪ್ರತುಲ್ ಶಾಹ್ದಿಯೋ ಆರೋಪಿಸಿದ್ದಾರೆ.
ಈ ಹಿಂದೆ ಮೇವಿನ ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ಗೆ 14 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಶಿಕ್ಷೆಯ ಬಹುಪಾಲು ಭಾಗವನ್ನು ಅವರು ರಿಮ್ಸ್ನಲ್ಲಿ ಕಳೆಯುತ್ತಿದ್ದಾರೆ.
ಸದ್ಯ ಪ್ರತುಲ್ ಫೇಸ್ಬುಕ್ನಲ್ಲಿ ಲಾಲೂ ಪ್ರಸಾದ್ ಅವರ ಫೋಟೋವೊಂದನ್ನ ಪೋಸ್ಟ್ ಮಾಡಿದ್ದು, ಜೈಲಿನ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.
"ಜೈಲಿನ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿಯೂ ಮಾಜಿ (ಬಿಹಾರ)ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ದರ್ಬಾರ್ ಮಾಡುತ್ತಿದ್ದಾರೆ. ಕ್ಷಮಿಸಿ - ಅವರ ಜೊತೆ ಆರೋಗ್ಯ ಸಚಿವ ಸಚಿವ ಬನ್ನಾ ಗುಪ್ತಾ ಜಿ ಅವರೂ ಇದ್ದಾರೆ. ಅವರು ಮೊಬೈಲ್ನಲ್ಲಿ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಿ ಗೌರವಾನ್ವಿತ ಮುಖ್ಯಮಂತ್ರಿಗಳೇ" ಎಂದು ಅಲ್ಲಿನ ಸಿಎಂಗೆ ಬಿಜೆಪಿ ವಕ್ತಾರರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನ ಮಾಡಿ ಒತ್ತಾಯಿಸಿದ್ದಾರೆ.