ಶ್ರೀನಗರ: ಬುಧವಾರ ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಸಾವನ್ನಪ್ಪಿದ ಮೂವರು ಉಗ್ರರಲ್ಲಿ ಲಷ್ಕರ್-ಎ-ತೋಯ್ಬಾ ಕಮಾಂಡರ್ ಕೂಡ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಆರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹತ್ಯೆಗೈದ ಎಲ್‌ಇಟಿ ಕಮಾಂಡರ್ ನಸೀರ್-ಯು-ದಿನ್ ಲೋನ್ ಹಾಗೂ ಇಬ್ಬರು ಉಗ್ರರು ಕುಪ್ವಾರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಉಗ್ರರ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಇದು ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರರಲ್ಲಿ ಓರ್ವ ನಸೀರ್-ಯು-ದಿನ್ ಲೋನ್ ಒಬ್ಬನಾಗಿದ್ದು, ಏಪ್ರಿಲ್ 18ರಂದು ಸೊಪೋರ್ನ್ನಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಮತ್ತು ಮೇ 4ರಂದು ಹಂದ್ವಾರಾದಲ್ಲಿ ಹಲವು ಮಂದಿ ಸಿಆರ್‌ಪಿಎಫ್ ಜವಾನರನ್ನು ಹತ್ಯೆ ಮಾಡಿದ್ದ ಎಂದು ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.