ನವದೆಹಲಿ: ರಾಷ್ಟ್ರ ರಾಜಧಾನಿಯ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ನವದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಈ ರೋಗಿ ವಿದೇಶ ಪ್ರವಾಸ ಮಾಡಿದ ಇತಿಹಾಸವಿಲ್ಲ. ಕೊರೊನಾ ಸೋಂಕಿತ ಪೇಟಿಎಂ ಉದ್ಯೋಗಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಸಂಪರ್ಕಕ್ಕೆ ಬಂದ ನಂತರ ಮಹಿಳೆಗೂ ಕೊರೊನಾ ವೈರಸ್ ತಗುಲಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಹಿಳೆ ಶನಿವಾರ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ವೈರಸ್ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಫ್ದರ್ಜಂಗ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.