ಲಾತೂರ್ (ಮಹಾರಾಷ್ಟ್ರ) : ಅಪ್ರಾಪ್ತ ವಯಸ್ಸಿನ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನ್ನನು ಪೊಲೀಸರು ಬಂಧಿಸಿದ್ದಾರೆ.
ಔಸಾದಲ್ಲಿ ಶಿಕ್ಷಕನಾಗಿರುವ ಪರಮೇಶ್ವರ್ ಪಾವ್ಲೆ ಮಗಳಿಗೆ ಕಿರುಕುಳ ನೀಡಿದ ವ್ಯಕ್ತಿ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ಕುಟುಂಬ ವಾಸವಾಗಿರುವ ಸುಶೀಲದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಆಕೆಯ ಅಪ್ಪ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿಯ ತಾಯಿ ದೂರು ನೀಡಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ನಾವು ಆರೋಪಿಯನ್ನು ಬಂಧಿಸಿದ್ದೇವೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಸಂಜಯ್ ಪವಾರ್ ಹೇಳಿದ್ದಾರೆ.