ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕದ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಅನೇಕ ಅರ್ಜಿಗಳನ್ನು ಸಲ್ಲಿಸಿದ ವಕೀಲರಿಗೆ ಸುಪ್ರೀಂಕೋರ್ಟ್ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇಂತಹ ವಿಷಯಗಳನ್ನು ಕೈಗೆತ್ತಿಕೊಳ್ಳಲು ನ್ಯಾಯಪೀಠ ಒಲವು ತೋರಿಲ್ಲ. ಈ ಪಿಐಎಲ್ಗಳನ್ನು ಪ್ರಚಾರಕ್ಕಾಗಿ ಮಾತ್ರ ಸಲ್ಲಿಸಲಾಗುತ್ತದೆ. ಈ ರೀತಿಯ ಅನೇಕ ಅರ್ಜಿಗಳನ್ನು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಸಾರ್ವಜನಿಕ ಹಿತಾಸಕ್ತಿಯ ವಕೀಲರಿಂದ ನಮಗೆ ಸಾಕಷ್ಟು ಪ್ರಕರಣಗಳಿವೆ. ಸಾಮಾಜಿಕ ಅಂತರದ ಸಮಸ್ಯೆಗಳನ್ನು ನಿಭಾಯಿಸುವುದು ವ್ಯವಸ್ಥೆ ಅಡಿಯಲ್ಲಿ ಬರುತ್ತದೆ. ಆರ್ಟಿಕಲ್ 32ರ ಅಡಿ ನ್ಯಾಯಾಲಯಕ್ಕೆ ಬರುವುದಿಲ್ಲ. ಕೆಲಸದ ಕೊರತೆಯಿಂದಾಗಿ ಈ ಅರ್ಜಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿದೆ.