ನವದೆಹಲಿ : ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮನಮೋಹನ್ ಸಿಂಗ್‌ಗೆ ಇಂದು ಜನ್ಮದಿನದ ಸಂಭ್ರಮವಾಗಿದೆ. 88ನೇ ವರ್ಷಕ್ಕೆ ಕಾಲಿಟ್ಟಿರುವ ಸಿಂಗ್ ಅವರಿಗೆ ದೇಶದ ನಾನಾ ಭಾಗಗಳಿಂದ ರಾಜಕಾರಣಿಗಳು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಶುಭಾಶಯ ಕೋರಿದ್ದಾರೆ.
![pm modi](https://etvbharatimages.akamaized.net/etvbharat/prod-images/8946226_singh.jpg)
ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
![rahul gandhi](https://etvbharatimages.akamaized.net/etvbharat/prod-images/8946226_rahul.jpg)
ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ವೀಟ್ ಮೂಲಕ ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಪ್ರಧಾನಿ ಹುದ್ದೆಯ ಅನುಪಸ್ಥಿತಿ ಭಾರತೀಯರಿಗೆ ಕಾಡುತ್ತಿದೆ. ಅವರ ಪ್ರಮಾಣಿಕತೆ, ಸಭ್ಯತೆ ಹಾಗೂ ದೇಶಕ್ಕೆ ನೀಡಿರುವ ಕಾಣಿಕೆ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೇರಿ ಹಲವರು ಮನಮೋಹನ್ ಸಿಂಗ್ ಜನ್ಮದಿನಕ್ಕೆ ಶುಭಕೋರಿದ್ದಾರೆ.