ETV Bharat / bharat

ಪಾಸ್ವಾನ್​ಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಅಂತಿಮ ನಮನ

ನಿನ್ನೆ ವಿಧಿವಶರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.

Leaders pay last respects to Ram Vilas Paswan
ಅಂತಿಮ ನಮನ
author img

By

Published : Oct 9, 2020, 1:23 PM IST

ನವದೆಹಲಿ: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ನಿನ್ನೆ ಕೊನೆಯುಸಿರೆಳೆದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74)​ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್​ಗೆ ಗಣ್ಯರಿಂದ ಅಂತಿಮ ನಮನ

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ವಿಧಿವಶರಾದ ದಲತ ನಾಯಕ, ಎಲ್​ಜೆಡಿ ಮುಖಂಡ ಪಾಸ್ವಾನ್​ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಯಿತು. ಇಲ್ಲಿಗೆ ಆಗಮಿಸಿದ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಸೇರಿದಂತೆ ಇತರ ಗಣ್ಯರು ಪಾಸ್ವಾನ್​ ಅವರ ಅಂತಿಮ ದರ್ಶನವನ್ನು ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್​ ಅವರು ಎಲ್​​ಜೆಪಿ ಪಕ್ಷದ ನಾಯಕರಾಗಿದ್ದು, ಎನ್​ಡಿಎ ಜತೆ ಕೈ ಜೋಡಿಸಿ, ಕೇಂದ್ರದ ಬಿಜೆಪಿ ನೇತೃತ್ವದ ಎನ್​​ಡಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಐದು ದಶಕಗಳಿಗಿಂತಲೂ ಹೆಚ್ಚು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ಕಳೆದ ಕೆಲವು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.