ಹೈದರಾಬಾದ್: ಮುಂಬರುವ 24 ಗಂಟೆಗಳ ಕಾಲ ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಸ್ತುತ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ಕಡಿಮೆ ಒತ್ತಡದ ಪ್ರದೇಶವು ಮುಂದಿನ 24 ಗಂಟೆಗಳಲ್ಲಿ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
"ಮಧ್ಯ ಬಂಗಾಳ ಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಪ್ರಸ್ತುತ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ 24 ಗಂಟೆಗಳಲ್ಲಿ ಇದು ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ" ಎಂದು ಭಾರತೀಯ ಹವಾಮಾನ ಇಲಾಖೆ ಹೈದರಾಬಾದ್ ನಿರ್ದೇಶಕಿ ನಾಗರತ್ನ ಹೇಳಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು. "ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಮಳೆ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಜನರು ಚಿಂತಿಸುವ ಅಗತ್ಯವಿಲ್ಲ" ಎಂದು ಹೇಳಿದ್ದಾರೆ.