ETV Bharat / bharat

4ಗಂಟೆ, 100 ಪ್ರಶ್ನೆ... ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ದಾಖಲಿಸಿದ ಅಡ್ವಾಣಿ! - ಬಾಬ್ರಿ ಮಸೀದಿ ಧ್ವಂಸ ಪ್ರಕರಣ

ಬಾಬ್ರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಪ್ರಧಾನಿ ಎಲ್​.ಕೆ ಅಡ್ವಾಣಿ ಇಂದು ತಮ್ಮ ಹೇಳಿಕೆ ನೀಡಿದ್ದಾರೆ.

LK Advani
LK Advani
author img

By

Published : Jul 24, 2020, 5:39 PM IST

ಲಕ್ನೋ: 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ಮುಖಂಡ ಎಲ್​.ಕೆ ಅಡ್ವಾಣಿ ಇಂದು ತಮ್ಮ ಹೇಳಿಕೆ ದಾಖಲು ಮಾಡಿದ್ದು, ಬರೋಬ್ಬರಿ 4 ಗಂಟೆಗಳ ಕಾಲ ಅವರು ವಿಚಾರಣೆ ಎದುರಿಸಿದ್ದಾಗಿ ತಿಳಿದು ಬಂದಿದೆ.

ಸಿಬಿಐನ ವಿಶೇಷ ಕೋರ್ಟ್​ ಎದುರು ವಿಡಿಯೋ ಕಾನ್ಪರೆನ್ಸ್​ ಮೂಲಕ ತಮ್ಮ ಹೇಳಿಕೆ ನೀಡಿದ್ದು, ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 3:30ರವರೆಗೆ ಅವರನ್ನ ವಿಚಾರಣೆಗೊಳಪಡಿಸಲಾಗಿತ್ತು ಎಂದು ಅಡ್ವಾಣಿ ಪರ ವಕೀಲರು ಮಾಹಿತಿ ನೀಡಿದ್ದಾರೆ. ತಮ್ಮ ಮೇಲೆ ಕೇಳಿ ಬಂದಿರುವ ಎಲ್ಲ ಆರೋಪ ಅಡ್ವಾಣಿ ಅಲ್ಲಗಳೆದಿದ್ದಾರೆ ಎನ್ನಲಾಗಿದೆ. ಇದೇ ವಿಷಯವಾಗಿ ಕಳೆದೆರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಾಜಿ ಉಪ ಪ್ರಧಾನಿ ಅಡ್ವಾಣಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪ್ರಸ್ತುತ ಸಿಆರ್‌ಪಿಸಿಯ ಸೆಕ್ಷನ್ 313ರ ಅಡಿಯಲ್ಲಿ ಪ್ರಕರಣದ ಆರೋಪಿಗಳ ಹೇಳಿಕೆ ದಾಖಲು ಮಾಡಿಕೊಂಡಿರುವ ಸಿಬಿಐ ವಿಶೇಷ ನ್ಯಾಯಾಲಯ ಆಗಸ್ಟ್​ 31ರಂದು ಅಂತಿಮ ತೀರ್ಪು ಹೊರಹಾಕಲಿದೆ.

ಬಾಬ್ರಿ ಮಸೀದಿ ನಾಶ ಪ್ರಕರಣ: ಸಿಬಿಐ ನ್ಯಾಯಾಲಯಕ್ಕೆ ಎಲ್. ಕೆ. ಅಡ್ವಾಣಿ ಹಾಜರು

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿ ಈಗಾಗಲೇ ಮುರಳಿ ಮನೋಹರ್​ ಜೋಶಿ, ಉಮಾ ಭಾರತಿ ಸೇರಿದಂತೆ ಸಿಬಿಐ ವಿಶೇಷ ಕೋರ್ಟ್​ ಅನೇಕರ ಹೇಳಿಕೆ ಪಡೆದುಕೊಂಡಿದೆ.ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಎಲ್​​​.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ಸಂಸದರಾದ ಬ್ರಿಜ್ ಭೂಷಣ್ ಸಿಂಗ್, ಸಾಕ್ಷಿ ಮಹಾರಾಜ್, ಭೂಷಣ ಸಿಂಗ್, ಆರ್​.ಎನ್ ಶ್ರೀವಾಸ್ತವ್​, ಲಲ್ಲು ಸಿಂಗ್ ಸೇರಿದಂತೆ 32 ಜನರ ವಿರುದ್ಧ ವಿಚಾರಣೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉತ್ತರಪ್ರದೇಶ ಸಿಐಡಿ ತನಿಖೆ ನಡೆಸಿ, ಸಿಬಿಐಗೆ ಹಸ್ತಾಂತರ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಒಟ್ಟು 48 ಎಫ್​ಐಆರ್​ ದಾಖಲಾಗಿವೆ.ಒಟ್ಟು 49 ಮಂದಿ ವಿರುದ್ಧ ದೋಷಾರೋಪ ಪಟ್ಟಿ ದಾಖಲಾಗಿದ್ದು, ಇದರಲ್ಲಿ ಈಗಾಗಲೇ 17 ಮಂದಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.