ಲತೇಹರ್ (ಜಾರ್ಖಂಡ್): ಸ್ಥಳೀಯ ಬಿಜೆಪಿ ಮುಖಂಡ ಜಯವರ್ಧನ್ ಸಿಂಗ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಕಳೆದ ರಾತ್ರಿ 7.30ರ ಸುಮಾರಿಗೆ ಬಾರ್ವಾಡಿಹ್ ಬಸ್ ನಿಲ್ದಾಣದ ಬಳಿ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಈ ಘಟನೆ ಜನನಿಬಿಡ ಪ್ರದೇಶದಲ್ಲಿ ನಡೆದಿದ್ದು, ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದರೂ ಯಶಸ್ವಿಯಾಗಿಲ್ಲ ಎಂದು ಪೊಲೀಸ್ ಮೂಲ ತಿಳಿಸಿದೆ.
ಸದ್ಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.