ಅಮಾರವತಿ: ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರಪ್ರದೇಶ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ನಿಗದಿಗೊಳಿಸಿದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಇಂದು ಅಮರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಂಧ್ರಪ್ರದೇಶ ರಾಜ್ಯ ಚುನಾವಣಾ ಆಯುಕ್ತ ಎನ್ ರಮೇಶ್ಕುಮಾರ್, ಈ ಬಗ್ಗೆ ಮಾಹಿತಿ ನೀಡಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗೆ ನಿಗದಿಪಡಿಸಿದ್ದ ಚುನಾವಣೆಯನ್ನು ಆರು ವಾರಗಳ ಕಾಲ ಮುಂದೂಡಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.