ETV Bharat / bharat

ಲಾಕ್​ಡೌನ್ ಸಮಯದಲ್ಲಿ ಪೊಲೀಸರಿಗೆ ಕಡಿವಾಣ ಹಾಕಿ: ಅರ್ಜಿ ತಿರಸ್ಕರಿಸಿದ ಸುಪ್ರೀಂ - ಲಾಠಿ ಚಾರ್ಜ್​ ಬೇಡ ಎಂದು ಮನವಿ

ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸರ ದೌರ್ಜನ್ಯ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.

sc dismisses plea of public movement
ಅರ್ಜಿ ತಿರಸ್ಕರಿಸಿದ ಸುಪ್ರೀಂ
author img

By

Published : Apr 15, 2020, 6:09 PM IST

ನವದೆಹಲಿ: ಲಾಕ್​ಡೌನ್​ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಬರುವವರನ್ನು ಪೊಲೀಸರು ಹೊಡೆಯುವುದನ್ನು ನಿರ್ಬಂಧಿಸುವುದು ಮತ್ತು ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಾಧೀಶರಾದ ಎನ್.ವಿ. ರಮಣ, ಎಸ್.ಕೆ. ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಈ ಅರ್ಜಿಯಲ್ಲಿ ನಮಗೆ ಯಾವುದೇ ಮೌಲ್ಯ ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಆದೇಶದಲ್ಲಿ ತಿಳಿಸಿದೆ.

ಗುವಾಹಟಿ ಮೂಲದ ವಕೀಲರೊಬ್ಬರು ಸಲ್ಲಿಸಿದ ಮನವಿಯಲ್ಲಿ, ಅಗತ್ಯ ಸರಕುಗಳನ್ನು ಖರೀದಿಸಲು ಮನೆಗಳಿಂದ ಹೊರಹೋಗುವ ಜನಸಂದಣಿ ಚಲನೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿತ್ತು.

ಲಾಕ್​ಡೌನ್ ಘೋಷಣೆಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ವಿಡಿಯೊಗಳು ಕಾಣಿಸಿಕೊಂಡಿದ್ದು, ಲಾಕ್‌ಡೌನ್ ಉಲ್ಲಂಘಿಸುತ್ತಿರುವ ವ್ಯಕ್ತಿಗಳ ಮೇಲೆ ಪೊಲೀಸರು ದೌರ್ಜನ್ಯದ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘಿಸುವವರನ್ನು ರಸ್ತೆಯಲ್ಲಿ ತೆವಳುವಂತೆ ಮಾಡುವುದು ಸೇರಿದಂತೆ ಲಾಠಿ ಚಾರ್ಜ್​ ಮಾಡಿರುವುದು ಕಂಡು ಬಂದಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇಂತಾ ಘಟನೆಗಳು ಅಗತ್ಯ ವಸ್ತುಗಳನ್ನು ಖರೀದಿಸಲು ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಹೊರ ಹೋಗುವ ಜನರಲ್ಲಿ ಭೀತಿ ಸೃಷ್ಟಿಸುತ್ತಿವೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

-

ETV Bharat Logo

Copyright © 2025 Ushodaya Enterprises Pvt. Ltd., All Rights Reserved.