ETV Bharat / bharat

ಲಾಕ್‌ಡೌನ್ ಎಫೆಕ್ಟ್‌.. ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಶೀಘ್ರದಲ್ಲೇ ಮಾರ್ಗಸೂಚಿಗಳು ಜಾರಿ.. - ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ

ರಾಷ್ಟ್ರವ್ಯಾಪಿ ಲಾಕ್‌ಡೌನ್​ನಿಂದಾಗಿ ಹಲವು ಯೋಜನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವುದರಿಂದ ಬಿಲ್ಡರ್​ಗಳು ತಮ್ಮ ಸೈಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸಹಾಯ ಮಾಡುವಂತೆ ಮಿಶ್ರಾ ಹೇಳಿದ್ದಾರೆ.

real
real
author img

By

Published : Apr 9, 2020, 11:22 AM IST

ನವದೆಹಲಿ: ಕೋವಿಡ್-19ನಿಂದ ಉಂಟಾದ ಬಿಕ್ಕಟ್ಟನ್ನು ಎದುರಿಸಲು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಸಹಾಯ ಮಾಡಲು ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿಗಳು ಮತ್ತು ನಿಯಂತ್ರಣ ಕ್ರಮಗಳನ್ನು ಹೊರಡಿಸಲಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ತಿಳಿಸಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್​ನಿಂದಾಗಿ ಹಲವು ಯೋಜನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವುದರಿಂದ ಬಿಲ್ಡರ್​ಗಳು ತಮ್ಮ ಸೈಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸಹಾಯ ಮಾಡುವಂತೆ ಮಿಶ್ರಾ ಹೇಳಿದ್ದಾರೆ.

  • Special guidelines & regulatory measures for all real estate sectors including RERA would be soon issued to combat this crisis situation.
    We need to see through the situation for the long term benefit of our workers as well as the country. pic.twitter.com/jyDhEG3saC

    — Durga Shanker Mishra (@Secretary_MoHUA) April 8, 2020 " class="align-text-top noRightClick twitterSection" data=" ">

2,600 ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್‌ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಗಿದೆ ಎಂದು ದುರ್ಗಾ ಶಂಕರ್ ಮಿಶ್ರಾ ಟ್ವೀಟ್ ಮೂಲಕ ತಿಳಿಸಿದ್ದಾರೆ. ಲಾಕ್‌ಡೌನ್​ನಿಂದಾಗಿ ಉಂಟಾಗಿರುವ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಅವುಗಳನ್ನು ನಿವಾರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

  • We are caught up in an unprecedented scenario that has captured the whole world in its grip. In these crucial times, we need to take up measures that would help us in reviving our economy & all industry & business sectors. pic.twitter.com/eDWBaai1TP

"ಜಗತ್ತಿನ ಆರ್ಥಿಕತೆ ಮೇಲೆ ಕೋವಿಡ್-19 ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ನಮ್ಮ ಆರ್ಥಿಕತೆ, ಉದ್ಯಮ ಮತ್ತು ವ್ಯಾಪಾರ ಕ್ಷೇತ್ರಗಳನ್ನು ಪುನರುಜ್ಜೀವಗೊಳಿಸಲು ಕ್ರಮಕೈಗೊಳ್ಳಬೇಕಾಗಿದೆ" ಎಂದು ಮಿಶ್ರಾ ಟ್ವೀಟ್ ಮಾಡಿದ್ದಾರೆ. ಯೋಜನೆಗಳೆಲ್ಲವೂ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕಾರಣ ಎಲ್ಲಾ ರಿಯಲ್ ಎಸ್ಟೇಟ್ ಡೆವಲಪರ್‌ಗಳು ತಮ್ಮ ಕಾರ್ಮಿಕರು ಮತ್ತು ಕೆಲಸಗಾರರ ಬಗ್ಗೆ ವಿಶೇಷ ಗಮನಹರಿಸುವಂತೆ ಮಿಶ್ರಾ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.