ETV Bharat / bharat

ಷರತ್ತುಗಳೊಂದಿಗೆ ಅಂಗಡಿಗಳನ್ನು ತೆರೆಯಲು ಕೇಂದ್ರ ಅನುಮತಿ

ಕಳೆದ ಕೆಲದಿನಗಳ ಹಿಂದೆಯಷ್ಟೆ ಲಾಕ್​ಡೌನ್​ನಿಂದ ಕೊಂಚ ವಿನಾಯ್ತಿ ನೀಡಿದ್ದ ಕೇಂದ್ರ ಸರ್ಕಾರ ಈಗ ಕೆಲ ಷರತ್ತುಗಳೊಂದಿಗೆ ಮತ್ತಷ್ಟು ವಿನಾಯ್ತಿಗಳನ್ನು ಘೋಷಿಸಿದೆ.

author img

By

Published : Apr 25, 2020, 9:57 AM IST

Centre Allows Shops To Open With Conditions
ಅಂಗಡಿಗಳನ್ನು ತೆರೆಯಲು ಕೇಂದ್ರ ಅನುಮತಿ

ನವದೆಹಲಿ: ಲಾಕ್​ಡೌನ್​ ಘೋಷಣೆಯಾಗಿ ಒಂದು ತಿಂಗಳ ನಂತರ, ವಸತಿ ಪ್ರದೇಶಗಳಲ್ಲಿನ ಎಲ್ಲಾ ನೆರೆಹೊರೆಯ ಅಂಗಡಿ(ಮಾಲ್‌ಗಳನ್ನು ಹೊರತುಪಡಿಸಿ)ಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

  • #COVID19 update
    All registered shops regd under Shops & Establishment Act of respective States/ UTs, including shops in residential complexes, neighborhood & standalone shops exempted from #lockdown restrictions.

    Prohibited: Shops in single & multi brand malls pic.twitter.com/NNz9abgWdA

    — Spokesperson, Ministry of Home Affairs (@PIBHomeAffairs) April 24, 2020 " class="align-text-top noRightClick twitterSection" data=" ">

ಈ ಬಗ್ಗೆ ಶುಕ್ರವಾರ ರಾತ್ರಿ ಆದೇಶ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯ ವಸತಿ ಸಮುಚ್ಚಯಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದೆ. ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವಿಕೆ, ಅಂಗಡಿಯಲ್ಲಿ ಕೆಲಸ ಮಾಡುವವರು ಶೇ.50ರಷ್ಟು ಮಂದಿ ಮಾತ್ರ ಕರ್ತವ್ಯ ನಿರ್ವಹಿಸಬೇಕು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದೆ.

ನಗರಸಭೆ ಹಾಗೂ ಪುರಸಭೆ ಪ್ರದೇಶಗಳಲ್ಲಿರುವ ಮಾರುಕಟ್ಟೆ ಸ್ಥಳಗಳು, ಮಾಲ್‌ಗನ್ನು ತೆರಯಲು 3ರವರೆಗೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ವಿನಾಯಿತಿ ಕೊರೊನಾ ಹಾಟ್‌‌ಸ್ಪಾಟ್ ಹಾಗೂ ಕಂಟೈನ್ಮೆಂಟ್ ಝೋನ್‌‌ಗಳಿಗೆ ಅನ್ವಯಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.