ETV Bharat / bharat

ಲೋಕ ಸಮರ: ಭಾನುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ - ಪ್ರಧಾನಿ ಮೋದಿ

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

ಬಿಜೆಪಿ
author img

By

Published : Apr 5, 2019, 8:51 AM IST

ನವದೆಹಲಿ: ಪ್ರಥಮ ಹಂತದ ಲೋಕಸಭಾ ಚುನಾವಣೆಗೆ ಇನ್ನೇನು ಒಂದು ವಾರ ಉಳಿದಿದ್ದು, ಬಿಜೆಪಿ ಭಾನುವಾರದಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

20 ಮಂದಿ ನೇತೃತ್ವದ ತಂಡ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಈ ತಂಡದ ನೇತೃತ್ವ ವಹಿಸಿದ್ದು, ಅರುಣ್​ ಜೇಟ್ಲಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ರವಿಶಂಕರ್ ಪ್ರಸಾದ್, ಮಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್ ಚೌಹಾಣ್​​ ಸದಸ್ಯರಾಗಿದ್ದಾರೆ. ಈ ಸಮಿತಿ ಹದಿನೈದು ಉಪ ಸಮಿತಿಯನ್ನು ಹೊಂದಿತ್ತು.

2014ರ ಲೋಕ ಸಮರದ ವೇಳೆ ಬಿಜೆಪಿ ಏ. 7ರಂದು ಪ್ರಣಾಳಿಕೆ ಬಿಡುಗಡೆಗೊಳಿಸಿತ್ತು. ಈ ಬಾರಿಯೂ ಅದೇ ದಿನಾಂಕದಂದು ಪ್ರಣಾಳಿಕೆ ಬಿಡುಗಡೆಗೆ ಸಿದ್ಧವಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ ಮತದಾನ ಏ. 11ರಂದು ಆರಂಭವಾಗಿಲಿದ್ದು, ಏಳು ಹಂತದ ಮತದಾನ ಪ್ರಕ್ರಿಯೆ ಮೇ 19ರಂದು ಮುಕ್ತಾಯವಾಗಲಿದೆ. ಫಲಿತಾಂಶ ಮೇ 23ರಂದು ಹೊರಬೀಳಲಿದೆ.

Intro:Body:

ಲೋಕಸಮರ: ಭಾನುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ನವದೆಹಲಿ: ಪ್ರಥಮ ಹಂತದ ಲೋಕಸಭಾ ಚುನಾವಣೆಗೆ ಇನ್ನೇನು ಒಂದು ವಾರ ಉಳಿದಿದ್ದು ಬಿಜೆಪಿ ಭಾನುವಾರದಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

20 ಮಂದಿ ನೇತೃತ್ವದ ತಂಡ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಈ ತಂಡದ ನೇತೃತ್ವ ವಹಿಸಿದ್ದು ಅರುಣ್​ ಜೇಟ್ಲಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ರವಿಶಂಕರ್ ಪ್ರಸಾದ್, ಮಖ್ತಾರ್ ಅಬ್ಬಾಸ್ ನಖ್ವಿ ಹಾಘೂ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್ ಚೌಹಾಣ್​​ ಸದಸ್ಯರಾಗಿದ್ದಾರೆ. ಈ ಸಮಿತಿ ಹದಿನೈದು ಉಪಸಮಿತಿಯನ್ನು ಹೊಂದಿತ್ತು.

2014ರ ಲೋಕಸಮರದ ವೇಳೆ ಬಿಜೆಪಿ ಏ 7ರಂದು ಬಿಡುಗಡೆಗೊಳಿಸಿತ್ತು. ಈ ಬಾರಿಯೂ ಅದೇ ದಿನಾಂಕದಂದು ಪ್ರಣಾಳಿಕೆ ಮಾಡಲು ಸಿದ್ಧವಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ ಏ 11ರಂದು ಆರಂಭವಾಗಿಲಿದ್ದು ಏಳು ಹಂತದ ಮತದಾನ ಪ್ರಕ್ರಿಯೆ ಮೇ 19ರಂದು ಮುಕ್ತಾಯವಾಗಲಿದೆ. ಫಲಿತಾಂಶ ಮೇ 23ರಂದು ಹೊರಬೀಳಲಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.