ನವದೆಹಲಿ : ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಪ್ರಧಾನಿ ನರೇಂದ್ರ ಮೋದಿಯವರ "ಜಾನ್ ಬಿ, ಜಹಾನ್ ಬಿ" ಎಂಬ ಧ್ಯೇಯವಾಕ್ಯವನ್ನು ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು "ಜೀವನ ಮತ್ತು ಜೀವನೋಪಾಯ ಎರಡೂ ಮುಖ್ಯ ಎಂಬ ಪ್ರಧಾನ ಮಂತ್ರಿಯ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಬಡವರು ಮತ್ತು ದುರ್ಬಲರ ಜೀವನ ಸುಗಮವಾಗಿಸಲು ಬರಿದಾದ ಕೈಗೆ ಹಣ ನೀಡುವ ಕುರಿತು ಸರ್ಕಾರವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ನಾನು ಎದುರು ನೋಡುತ್ತಿದ್ದೇನೆ. ಅದು ಜೀವನೋಪಾಯವನ್ನು ಉಳಿಸುತ್ತದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿನ್ನೆ ಪ್ರಧಾನ ಮಂತ್ರಿಯವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚೆ ನಡೆಸಿದ ನಂತರ ಚಿದಂಬರಂ ಅವರು ತಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾರೆ. ಸದ್ಯ ಎಲ್ಲಾ ರಾಜ್ಯಗಳ ಸಿಎಂಗಳ ಅಭಿಪ್ರಾಯಗಳ ಮೆರೆಗೆ ಲಾಕ್ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಣೆ ಮಾಡಲಾಗಿದೆ.