ಜೈಪುರ: ರಾಜಸ್ಥಾನದ ಝುನ್ ಝುನ್ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿ ವರದಿಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿ ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ ಆಳದಲ್ಲಿದೆ ಎಂದು ಜೈಪುರದ ಹವಾಮಾನ ಕೇಂದ್ರದ ನಿರ್ದೇಶಕ ಶಿವ ಗಣೇಶ್ ತಿಳಿಸಿದ್ದಾರೆ.