ETV Bharat / bharat

ಮಧ್ಯಪ್ರದೇಶ: ಎರಡಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು.. ಹಲವರಿಗೆ ಗಾಯ

2 ಅಂತಸ್ತಿನ ಕಟ್ಟಡ ಕುಸಿದ ಪರಿಣಾದ ಇಬ್ಬರು ಸಾವನ್ನಪ್ಪಿದ್ದರೆ, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 16 ಮಂದಿಯನ್ನು ರಕ್ಷಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ ಎನ್ನಲಾಗ್ತಿದೆ.

Madhya Pradesh: 2 died, 16 rescued in Dewas building collapse incident
ಮಧ್ಯಪ್ರದೇಶ: ಎರಡು ಸಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು..ಹಲವರಿಗೆ ಗಾಯ
author img

By

Published : Aug 26, 2020, 11:58 AM IST

ದೇವಾಸ್​(ಮಧ್ಯಪ್ರದೇಶ): 2 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ 16 ಮಂದಿಯನ್ನು ರಕ್ಷಿಸಿರುವ ಘಟನೆ ಇಲ್ಲಿನ ದೇವಾಸ್​ ನಗರದಲ್ಲಿ ನಡೆದಿದೆ.

ಇಲ್ಲಿನ ಸ್ಟೇಷನ್​ ರಸ್ತೆಯಲ್ಲಿರುವ ಲಾಲ್​​ಗೇಟ್ ಬಳಿಯ ಎರಡಂತಸ್ತಿನ ಕಟ್ಟಡ ಕುಸಿತದಿಂದ ಜನರಲ್ಲಿ ಆತಂಕ ಹೆಚ್ಚಾಗಿತ್ತು. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿದ್ದರು. ಬಳಿಕ ರಕ್ಷಣಾ ಕಾರ್ಯದಲ್ಲಿ 16 ಮಂದಿಯನ್ನು ರಕ್ಷಿಸಲಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ದೇವಾಸ್​​ನ ಎಎಸ್​​​ಪಿ ಜಗದೀಶ್ ದಾವರ್​ ಮಾಹಿತಿ ನೀಡಿದ್ದಾರೆ.

ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ಅಲ್ಲದೆ ರಕ್ಷಿಸಲಾದ ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯೂ ಸಹ ಕಟ್ಟಡ ಕುಸಿತಕ್ಕೆ ಕಾರಣವಾಗಿದೆ ಎಂದು ಎನ್​​ಡಿಆರ್​ಎಫ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಈ ಕುರಿತು ಕಟ್ಟಡ ಸಿಬ್ಬಂದಿ ಜತೆ ಮಾತನಾಡಿದ್ದೇನೆ. ಕಟ್ಟಡ 5-6 ವರ್ಷದ ಹಿಂದೆ ಕಟ್ಟಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.